Kannada

Fact Check: ಫ್ರೀಡಂ ಪಾರ್ಕ್​ನಲ್ಲಿ ಮುಗಿಲು ಮುಟ್ಟಿದ ಆಶಾ ಕಾರ್ಯಕರ್ತೆಯರ ಆಕ್ರೋಶ ಎಂದು 2020ರ ಹಳೆಯ ವಿಡಿಯೊ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ಈ ಪ್ರತಿಭಟನೆಗೆ ಸಂಬಂಧಿಸಿದ ವಿಡಿಯೊ ಒಂದು ವೈರಲ್ ಆಗುತ್ತಿದೆ. ವಿಡಿಯೊದಲ್ಲಿ ಫ್ಲೈಓವರ್‌ನಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು.

vinay bhat

ಗೌರವಧನವನ್ನು 15 ಸಾವಿರ ರೂಪಾಯಿಗೆ ಹೆಚ್ಚಿಸುವಂತೆ ಆಗ್ರಹಿಸಿ ಕಳೆದ 10 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸದ್ಯ ಆರೋಗ್ಯ ಇಲಾಖೆ ಸ್ಪಂದಿಸಿದ್ದು, ಆಶಾ ಕಾರ್ಯಕರ್ತೆಯರ ಇನ್ಸೆಂಟೀವ್ ಹೆಚ್ಚಳದ ಕುರಿತು ಪರಿಶೀಲನೆ ನಡೆಸಲು ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಈ ಪ್ರತಿಭಟನೆಗೆ ಸಂಬಂಧಿಸಿದ ವಿಡಿಯೊ ಒಂದು ವೈರಲ್ ಆಗುತ್ತಿದೆ. ವಿಡಿಯೊದಲ್ಲಿ ಫ್ಲೈಓವರ್‌ನಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು.

ಫೇಸ್​ಬುಕ್ ಬಳಕೆದಾರರೊಬ್ಬರು ಈ ವಿಡಿಯೊವನ್ನು ಹಂಚಿಕೊಂಡು, ‘‘ಫ್ರೀಡಂ ಪಾರ್ಕ್ ನಲ್ಲಿ ಮುಗಿಲು ಮುಟ್ಟಿದ ಆಶಾ ಕಾರ್ಯಕರ್ತೆಯರ ಆಕ್ರೋಶ. ಆಶಾ ಕಾರ್ಯಕರ್ತೆಯರಿಗೆ ಆಶ್ವಾಸನೆ ಕೊಟ್ಟವರು ಆಗಲಿ ವಿನಾಶ. ಆಶಾ ಕಾರ್ಯಕರ್ತೆಯರ ಮೇಲೆ 4 ವರ್ಷದಿಂದ ಖಾನ್ ಗ್ರೇಸ್ ಅಟ್ಟಹಾಸ 2028 ರ ಚುನಾವಣೆಯಲ್ಲಿ ಖಾನ್ ಗ್ರೇಸ್ ಸರ್ವನಾಶ’’ ಎಂದು ಬರೆದುಕೊಂಡಿದ್ದಾರೆ. (Archive)

Fact Check

ಈ ಸುದ್ದಿಯ ಸತ್ಯಾಸತ್ಯತೆಯನ್ನು ಸೌತ್ ಚೆಕ್ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೊ ವೈರಲ್ ಆಗುತ್ತಿದೆ ಎಂಬುದು ತಿಳಿದುಬಂದಿದೆ. ಇದು 2020ರ ಜನವರಿಯಲ್ಲಿ ಗೌರವಧನ ಹೆಚ್ಚಿಸಬೇಕು ಎಂಬ ಬೇಡಿಕೆ ಸೇರಿದಂತೆ ಇತರ ಬೇಡಿಕೆಗಳಿಗಾಗಿ ನಡೆದ ಪ್ರತಿಭಟನೆಯ ರ್ಯಾಲಿದ್ದಾಗಿದೆ.

ನಿಜಾಂಶವನ್ನು ತಿಳಿಯಲು ನಾವು ಮೊದಲಿಗೆ ವೈರಲ್ ವಿಡಿಯೊದ ಪ್ರಮುಖ ಕೀ-ಫ್ರೇಮ್​ಗಳನ್ನು ಗೂಗಲ್ ಲೆನ್ಸ್ ಸಹಾಯದಿಂದ ಹುಡುಕಿದ್ದೇವೆ. ಆಗ ಇದೇ ವೈರಲ್ ವಿಡಿಯೊದ ಸ್ಕ್ರೀನ್ ಶಾಟ್​ನೊಂದಿಗೆ 4 ಜನವರಿ 2020 ರಂದು ಪ್ರಜಾವಾಣಿ ವೆಬ್​ಸೈಟ್​ನಲ್ಲಿ ಪ್ರಕಟವಾದ ಲೇಖನ ಸಿಕ್ಕಿತು. ಇದರಲ್ಲಿರುವ ಮಾಹಿತಿಯ ಪ್ರಕಾರ, ತಿಂಗಳ ಗೌರವ ಧನಕನಿಷ್ಠ 12 ಸಾವಿರ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾವಿರಾರು ಆಶಾ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ರಾಯಚೂರು, ಬೀದರ್, ಕಲಬುರ್ಗಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ರೈಲು ಮೂಲಕ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣಕ್ಕೆಬೆಳಿಗ್ಗೆಯೇ ಬಂದಿಳಿದ ಕಾರ್ಯಕರ್ತೆಯರು, ನಿಲ್ದಾಣದಲ್ಲೇ ಜಮಾಯಿಸಿ ಪ್ರತಿಭಟನೆ ಆರಂಭಿಸಿದರು. ಅಲ್ಲಿಂದ ಶೇಷಾದ್ರಿ ರಸ್ತೆ ಮೇಲ್ಸೇತುವೆ ಮೂಲಕ ರ್ಯಾಲಿ ಸಾಗಿತು ಎಂದು ಬರೆಯಲಾಗಿದೆ.

ಹಾಗೆಯೆ ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಯೂಟ್ಯೂಬ್ ಚಾನೆಲ್ 2020ರ ಜನವರಿ 3ರಂದು ಹಂಚಿಕೊಂಡಿದ್ದ ವಿಡಿಯೊ ಪತ್ತೆಯಾಗಿದೆ. ಈ ವಿಡಿಯೊದ 5:26ರಿಂದ 7:01ರ ನಡುವಿನ ದೃಶ್ಯಗಳು ವೈರಲ್ ವಿಡಿಯೊದಲ್ಲಿರುವ ದೃಶ್ಯಗಳಿಗೆ ಹೋಲಿಕೆಯಾಗುತ್ತವೆ. ಬೆಂಗಳೂರಿನಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ಭಾಗವಹಿಸಿ, ಮಾಸಿಕ ಗೌರವಧನವನ್ನು ಸುಮಾರು 12,000ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿದರು. ಪ್ರಸ್ತುತ ಅವರಿಗೆ 1,000ದಿಂದ 2,000ದವರೆಗೆ ಗೌರವಧನ ನೀಡಲಾಗುತ್ತಿದೆ ಎಂಬ ಮಾಹಿತಿ ಇದರಲ್ಲಿದೆ.

ಟಿವಿ9 ಕನ್ನಡದ ಯೂಟ್ಯೂಬ್ ಚಾನೆಲ್​ನಲ್ಲಿ ಕೂಡ ಇದೇ ವೈರಲ್ ವಿಡಿಯೊವನ್ನು 2020ರ ಜನವರಿ 3ರಂದು ಪೋಸ್ಟ್ ಮಾಡಿದ್ದು, ಫ್ರೀಡಂ ಪಾರ್ಕ್ ಎದುರು ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ, ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆ ಎಂಬ ಶೀರ್ಷಿಕೆ ನೀಡಲಾಗಿದೆ.

ಹೀಗಾಗಿ ಈ ಎಲ್ಲ ಮಾಹಿತಿಯ ಆಧಾರದ ಮೇಲೆ, 2020ರ ಜನವರಿಯಲ್ಲಿ ಬೆಂಗಳೂರಿನಲ್ಲಿ ಮಾಸಿಕ ಗೌರವಧನವನ್ನು 12,000ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸಿದ್ದ ಹಳೆಯ ಪ್ರತಿಭಟನಾ ರ್ಯಾಲಿಯ ವಿಡಿಯೊವನ್ನು ನವೆಂಬರ್ 2026ರಲ್ಲಿ ನಡೆಯುತ್ತಿರುವ ಪ್ರತಿಭಟನೆಯ ದೃಶ್ಯ ಎಂದು ಸುಳ್ಳು ಹೇಳಿಕೆಯೊಂದಿಗೆ ವಿಡಿಯೊವನ್ನು ವೈರಲ್ ಮಾಡಲಾಗುತ್ತಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.

Fact Check: Massive gas pipe explosion in China seen in viral video? No, here are the facts

Fact Check: കൊല്‍ക്കത്തയില്‍ വിമാനത്താവളത്തിനായി മുസ്ലിം പള്ളി പൊളിക്കുന്ന ദൃശ്യങ്ങള്‍? വീഡിയോയുടെ സത്യമറിയാം

Fact Check: வி.எஸ்.பாபு உடலுக்கு அஞ்சலி செலுத்த முதலமைச்சர் விஜய் சிரித்தபடி சென்றாரா?உண்மை என்ன

Fact Check: ఉత్తరప్రదేశ్ ప్రభుత్వం బిస్మిల్లా ఖాన్ ఇంటిని కూల్చివేసిందా? కాదు, ప్రభుత్వ ప్రమేయం లేదని అంటున్న కుటుంబ సభ్యులు

Fact Check: Delhi Police fire at Sikh protesters over opening of Kartarpur border crossing? No, here are the facts