Kannada

Fact Check: ಇಸ್ರೇಲಿ ಮಿಲಿಟರಿ ಪ್ರಧಾನ ಕಚೇರಿಯ ಮೇಲೆ ಹಿಜ್ಬೊಲ್ಲಾ ದಾಳಿ ಎಂದು ವೈರಲ್ ಆಗುತ್ತಿರುವ ವೀಡಿಯೊ ನ್ಯೂಯಾರ್ಕ್​ನದ್ದಾಗಿದೆ

ಸಾಮಾಜಿಕ ಮಾಧ್ಯಮದಲ್ಲಿ ಬೆಂಕಿ ಹೊತ್ತಿಕೊಂಡ ಕಟ್ಟಡದ ವೀಡಿಯೊ ಒಂದು ವೈರಲ್ ಆಗುತ್ತಿದೆ. ಇದು ಇಸ್ರೇಲ್ ನಿಂದ ಬಂದಿದೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹೆಜ್ಬೊಲ್ಲಾ ಇಸ್ರೇಲಿ ಮಿಲಿಟರಿ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡಿದ್ದು, ಈ ವೀಡಿಯೊ ಆ ದಾಳಿಯದ್ದೇ ಎಂದು ಹೇಳಲಾಗುತ್ತಿದೆ.

Vinay Bhat

ಸಾಮಾಜಿಕ ಮಾಧ್ಯಮದಲ್ಲಿ ಬೆಂಕಿ ಹೊತ್ತಿಕೊಂಡ ಕಟ್ಟಡದ ವೀಡಿಯೊ ಒಂದು ವೈರಲ್ ಆಗುತ್ತಿದೆ. ಇದು ಇಸ್ರೇಲ್ ನಿಂದ ಬಂದಿದೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹೆಜ್ಬೊಲ್ಲಾ ಇಸ್ರೇಲಿ ಮಿಲಿಟರಿ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡಿದ್ದು, ಈ ವೀಡಿಯೊ ಆ ದಾಳಿಯದ್ದೇ ಎಂದು ಹೇಳಲಾಗುತ್ತಿದೆ.

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ಹಿಜ್ಬುಲ್ಲಾಹ್ ಯುದ್ದಪರಾಧಿ ಇಸ್ರೇಲ್ ನ ಮಿಲಿಟರಿ ಕೇಂದ್ರ ಕಚೇರಿಗೆ ದಾಳಿ ಮಾಡಿದ ಪರಿಣಾಮ’’ ಎಂದು ಬರೆದುಕೊಂಡಿದ್ದಾರೆ. (Archive)

Fact Check

ಈ ಸುದ್ದಿಯ ಸತ್ಯಾಸತ್ಯತೆಯನ್ನು ಸೌತ್ ಚೆಕ್ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವೀಡಿಯೊ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಈ ವೀಡಿಯೊ ಇಸ್ರೇಲ್‌ನದ್ದಲ್ಲ, ಬದಲಾಗಿ ಅಮೆರಿಕದ ನ್ಯೂಯಾರ್ಕ್ ನಗರದ ಮ್ಯಾನ್‌ಹ್ಯಾಟನ್‌ನಲ್ಲಿನ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದಾಗಿದೆ.

ನಿಜಾಂಶವನ್ನು ತಿಳಿಯಲು ನಾವು ವೈರಲ್ ವೀಡಿಯೊದ ಪ್ರಮುಖ ಕೀಫ್ರೇಮ್‌ಗಳನ್ನು ಗೂಗಲ್ ಲೆನ್ಸ್ ಸಹಾಯದಿಂದ ಹುಡುಕಾಟ ನಡೆಸಿದ್ದೇವೆ. ಈ ಸಂದರ್ಭ FDNY Response Videos ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವೀಡಿಯೊದ ದೀರ್ಘ ಆವೃತ್ತಿಯನ್ನು ನಾವು ಕಂಡುಕೊಂಡಿದ್ದೇವೆ. ಈ ವೀಡಿಯೊವನ್ನು ಏಪ್ರಿಲ್ 12 ರಂದು ಹಂಚಿಕೊಳ್ಳಲಾಗಿದೆ. ಇದರಲ್ಲಿರುವ ಮಾಹಿತಿಯ ಪ್ರಕಾರ, ಈ ವೀಡಿಯೊ ನ್ಯೂಯಾರ್ಕ್ ನಗರದ ಮ್ಯಾನ್‌ಹ್ಯಾಟನ್‌ನಿಂದ ಬಂದಿದೆ. ಮಿಡ್‌ಟೌನ್ ಮ್ಯಾನ್‌ಹ್ಯಾಟನ್‌ನಲ್ಲಿರುವ ಆರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಈ ಮಾಹಿತಿಯ ಆಧಾರದ ಮೇಲೆ, ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ಹುಡುಕಿದಾಗ, abc7ny ವೆಬ್‌ಸೈಟ್‌ನಲ್ಲಿ ಹಕ್ಕಿಗೆ ಸಂಬಂಧಿಸಿದ ವರದಿಯನ್ನು ನಾವು ಕಂಡುಕೊಂಡೆವು. ಈ ವರದಿಯನ್ನು ಏಪ್ರಿಲ್ 12 ರಂದು ಪ್ರಕಟಿಸಲಾಗಿದ್ದು, "ಮ್ಯಾನ್‌ಹ್ಯಾಟನ್‌ನ ಅಪಾರ್ಟ್‌ಮೆಂಟ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳದವರು ಹೆಣಗಾಡಿದರು. ಬೆಳಿಗ್ಗೆ 6 ಗಂಟೆ ಸುಮಾರಿಗೆ ಆರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತು. ತುರ್ತು ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಇಬ್ಬರು ಅಗ್ನಿಶಾಮಕ ದಳದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದಾಗ್ಯೂ, ಬೇರೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ." ಎಂಬ ಮಾಹಿತಿ ಇದರಲ್ಲಿದೆ.

ಈ ಸುದ್ದಿಯಲ್ಲಿ ವರದಿಗಾರ್ತಿಯೊಬ್ಬರು ವೈರಲ್ ವೀಡಿಯೊದಲ್ಲಿರುವ ಅದೇ ಕಟ್ಟದ ಎದುರು ನಿಂತು ವರದಿ ಮಾಡುತ್ತಿರುವುದನ್ನೂ ಕಾಣಬಹುದು.

Daily Dispatch ಎಂಬ ವೆಬ್​ಸೈಟ್​ನಲ್ಲಿ ಕೂಡ ಏಪ್ರಿಲ್ 13 ರಂದು ವೈರಲ್ ವೀಡಿಯೊದಲ್ಲಿರುವ ಸ್ಕ್ರೀನ್ ಶಾಟ್​ನೊಂದಿಗೆ ಸುದ್ದಿ ಪ್ರಕಟಿಸಿದ್ದು, ‘‘ಮ್ಯಾನ್‌ಹ್ಯಾಟನ್‌ನ ಅಪಾರ್ಟ್‌ಮೆಂಟ್ ಕಟ್ಟಡವೊಂದರಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭಾರಿ ಬೆಂಕಿಯನ್ನು ಅಗ್ನಿಶಾಮಕ ದಳದವರು ನಂದಿಸಿದ್ದಾರೆ. ಚೆಲ್ಸಿಯಾದ ವೆಸ್ಟ್ 22 ಮತ್ತು 23 ನೇ ಬೀದಿಗಳ ನಡುವಿನ 7 ನೇ ಅವೆನ್ಯೂದಲ್ಲಿರುವ ಆರು ಅಂತಸ್ತಿನ ಕಟ್ಟಡದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು’’ ಎಂಬ ಮಾಹಿತಿ ಇದರಲ್ಲಿದೆ.

ಹೀಗಾಗಿ ಈ ಎಲ್ಲ ಮಾಹಿತಿಯ ಆಧಾರದ ಮೇಲೆ, ಇಸ್ರೇಲಿ ಮಿಲಿಟರಿ ಪ್ರಧಾನ ಕಚೇರಿಯ ಮೇಲೆ ಹೆಜ್ಬೊಲ್ಲಾ ದಾಳಿಯನ್ನು ತೋರಿಸುವುದಾಗಿ ಹೇಳಿಕೊಳ್ಳುವ ವೈರಲ್ ವೀಡಿಯೊ ನ್ಯೂಯಾರ್ಕ್ ನಗರದ ಮ್ಯಾನ್‌ಹ್ಯಾಟನ್‌ನಿಂದ ಬಂದಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.

Fact Check: Iran bombs Israel’s nuclear reactor? No, here are the facts

Fact Check: UDF അധികാരത്തിലെത്തിയാല്‍ പത്മനാഭസ്വാമി ക്ഷേത്രനിധി റവന്യൂവകുപ്പിലേക്ക് മാറ്റുമെന്ന് സമദാനി?

Fact Check: பசி பஞ்சம் தீர திருப்பரங்குன்றத்தில் தீபம் ஏற்ற வேண்டும் என்றாரா முதல்வர் மு.க.ஸ்டாலின்?

Fact Check: కేంద్ర బలగాలు ప్రజలను ఈడ్చుకెళ్తున్న వీడియో బెంగాల్‌దా? కాదు, నిజం ఇదే

Fact Check: ಫರಿದಾಬಾದ್​ನಲ್ಲಿ ಲೈಂಗಿಕ ಕಿರುಕುಳದ ನಂತರ ಮಹಿಳೆಯನ್ನು ಚಲಿಸುತ್ತಿದ್ದ ಕಾರಿನಿಂದ ಫುಟ್​ಪಾತ್​ಗೆ ಎಸೆದಿದ್ದು ನಿಜವೇ?