Kannada

Fact Check: POK ಯಲ್ಲಿರುವ ಪಾಕಿಸ್ತಾನದ ಸೇನೆಯ ಶಸ್ತ್ರಾಸ್ತ್ರಗಳ ಡಿಪೋವನ್ನು ಭಾರತೀಯ ಸೇನೆ ಉಡಾಯಿಸಿದೆಯೇ?

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪಾಕ್ ಆಕ್ರಮಿತ ಕಾಶ್ಮೀರದ ಲೀಪಾ ಕಣಿವೆಯಲ್ಲಿರುವ ಪಾಕಿಸ್ತಾನದ ಯುದ್ಧಸಾಮಗ್ರಿ ಡಿಪೋಗವನ್ನು ಭಾರತೀಯ ಸೇನೆ ಉಡಾಯಿಸಿದೆ ಎಂದು ಹೇಳುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

vinay bhat

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪಾಕ್ ಆಕ್ರಮಿತ ಕಾಶ್ಮೀರದ ಲೀಪಾ ಕಣಿವೆಯಲ್ಲಿರುವ ಪಾಕಿಸ್ತಾನದ ಯುದ್ಧಸಾಮಗ್ರಿ ಡಿಪೋಗವನ್ನು ಭಾರತೀಯ ಸೇನೆ ಉಡಾಯಿಸಿದೆ ಎಂದು ಹೇಳುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ದೃಶ್ಯಾವಳಿಯಲ್ಲಿ ಸ್ಫೋಟದ ಶಬ್ದ ಕೂಡ ಕೇಳುತ್ತಿದೆ. (Archive)

ಇದೇರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಸೌತ್ ಚೆಕ್ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವೀಡಿಯೊ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಈ ವೀಡಿಯೊ ಮೂರು ವರ್ಷಗಳಿಗಿಂತ ಹಳೆಯದು ಆಗಿದೆ.

ವೈರಲ್ ಆಗುತ್ತಿರುವ ವೀಡಿಯೊದಲ್ಲಿನ ಕೆಲವು ಕೀಫ್ರೇಮ್‌ಗಳ ಪರಿಶೀಲನೆ ನಡೆಸಿದಾಗ ಈ ದೃಶ್ಯಗಳನ್ನು ಈ ಹಿಂದೆ ಕೆಲವು ಮಾಧ್ಯಮ ವರದಿಗಳಲ್ಲಿ ಬಳಸಲಾಗಿದೆ ಎಂದು ಬಹಿರಂಗಪಡಿಸಿದೆ. ಈ ದೃಶ್ಯದ ಸ್ಕ್ರೀನ್‌ಶಾಟ್ ಅನ್ನು ಮಾರ್ಚ್ 20, 2022 ರಂದು NDTV ಪ್ರಕಟಿಸಿದ ವರದಿಯಲ್ಲಿ ಕಾಣಬಹುದು.

ಉತ್ತರ ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿರುವ ಶಸ್ತ್ರಾಗಾರದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಸುದ್ದಿ ಇದರಲ್ಲಿದೆ. ಈ ವರದಿಯು ಸಾಂಕ್ರಾಮಿಕ ರೋಗದ ಸಮಯದಲ್ಲಿ ಪ್ರಕಟವಾದ ಕಾರಣ, ಹೆಚ್ಚಿನ ಮಾಹಿತಿ ಲಭ್ಯವಿಲ್ಲ.

ಈ ಸುಳಿವುಗಳನ್ನು ಬಳಸಿಕೊಂಡು ವಿವರವಾದ ಕೀವರ್ಡ್ ಹುಡುಕಾಟ ನಡೆಸಿದಾಗ ಘಟನೆಗೆ ಸಂಬಂಧಿಸಿದ ಹೆಚ್ಚಿನ ವರದಿಗಳು ದೊರೆತವು. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದ ಈ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಮತ್ತು ಅಪಘಾತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಎಬಿಪಿ ಲೈವ್ ವರದಿ ಮಾಡಿದೆ. ಈ ವರದಿಯಲ್ಲಿ ವೈರಲ್ ಆಗುತ್ತಿರುವ ವೀಡಿಯೊದ ಸ್ಕ್ರೀನ್‌ಶಾಟ್ ಅನ್ನು ಸಹ ನೀವು ನೋಡಬಹುದು.

ನಂತರದ ತನಿಖೆಯಲ್ಲಿ ಡೆಕ್ಕನ್ ಕ್ರಾನಿಕಲ್ ಸೇರಿದಂತೆ ವಿವಿಧ ಮಾಧ್ಯಮಗಳು ಈ ಘಟನೆಯನ್ನು ವರದಿ ಮಾಡಿದ್ದವು ಎಂದು ತಿಳಿದುಬಂದಿದೆ. ಪಾಕಿಸ್ತಾನಿ ಮಾಧ್ಯಮ ಸಂಸ್ಥೆ ಪಾಕಿಸ್ತಾನ್ ಟುಡೇ ಕೂಡ ಈ ಘಟನೆಯನ್ನು ವರದಿ ಮಾಡಿದೆ. ಈ ಅಪಘಾತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂಬುದು ಸ್ಪಷ್ಟವಾಗಿ ಬರೆಯಲಾಗಿದೆ.

ಹೀಗಾಗಿ POK ಯಲ್ಲಿರುವ ಪಾಕಿಸ್ತಾನದ ಸೇನೆಯ ಶಸ್ತ್ರಾಸ್ತ್ರಗಳ ಡಿಪೋವನ್ನು ಭಾರತೀಯ ಸೇನೆ ಉಡಾಯಿಸಿದೆ ಎಂಬ ಪ್ರಚಾರ ಆಧಾರರಹಿತವಾಗಿದೆ. ಮಾರ್ಚ್ 2022 ರಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಿಯಾಲ್‌ಕೋಟ್‌ನಲ್ಲಿರುವ ಶಸ್ತ್ರಾಗಾರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿಯ ದೃಶ್ಯಾವಳಿ ಇದಾಗಿದೆ ಎಂದು ನಾವು ಖಚಿತವಾಗಿ ಕೇಳುತ್ತೇವೆ.

Fact Check: Vijay’s rally sees massive turnout in cars? No, image shows Maruti Suzuki’s lot in Gujarat

Fact Check: പ്രധാനമന്ത്രി നരേന്ദ്രമോദിയെ ഡ്രോണ്‍ഷോയിലൂടെ വരവേറ്റ് ചൈന? ചിത്രത്തിന്റെ സത്യമറിയാം

Fact Check: தவெக மதுரை மாநாடு குறித்த கேள்விக்கு பதிலளிக்காமல் சென்றாரா எஸ்.ஏ. சந்திரசேகர்? உண்மை அறிக

Fact Check: ಮತ ಕಳ್ಳತನ ವಿರುದ್ಧದ ರ್ಯಾಲಿಯಲ್ಲಿ ಶಾಲಾ ಮಕ್ಕಳಿಂದ ಬಿಜೆಪಿ ಜಿಂದಾಬಾದ್ ಘೋಷಣೆ?

Fact Check: రాహుల్ గాంధీ ఓటర్ అధికార యాత్రను వ్యతిరేకిస్తున్న మహిళ? లేదు, ఇది పాత వీడియో