Kannada

Fact Check: ಕಾಶ್ಮೀರದಲ್ಲಿ ಕಲ್ಲಿನ ಸೈಜಿನ ಹಿಮಪಾತ ಎಂದು ಎಐ ವೀಡಿಯೊ ವೈರಲ್

ಸಾಮಾಜಿಕ ಮಾಧ್ಯಮದಲ್ಲಿ ಒಂದು ವೀಡಿಯೊ ವೈರಲ್ ಆಗುತ್ತಿದ್ದು, ಬೀದಿಯಲ್ಲಿ, ಮನೆಗಳ ಮೇಲೆ ಮತ್ತು ಕಾರುಗಳ ಮೇಲೆ ದೊಡ್ಡ ದೊಡ್ಡ ಆಲಿಕಲ್ಲುಗಳು ಬೀಳುತ್ತಿರುವುದನ್ನು ತೋರಿಸುತ್ತದೆ. ಈ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ ಎಂದು ಕ್ಲಿಪ್ ಹೇಳುತ್ತದೆ.

vinay bhat

ಸಾಮಾಜಿಕ ಮಾಧ್ಯಮದಲ್ಲಿ ಒಂದು ವೀಡಿಯೊ ವೈರಲ್ ಆಗುತ್ತಿದ್ದು, ಬೀದಿಯಲ್ಲಿ, ಮನೆಗಳ ಮೇಲೆ ಮತ್ತು ಕಾರುಗಳ ಮೇಲೆ ದೊಡ್ಡ ದೊಡ್ಡ ಆಲಿಕಲ್ಲುಗಳು ಬೀಳುತ್ತಿರುವುದನ್ನು ತೋರಿಸುತ್ತದೆ. ಈ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ ಎಂದು ಕ್ಲಿಪ್ ಹೇಳುತ್ತದೆ.

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ಕಾಶ್ಮೀರದಲ್ಲಿ ಕಲ್ಲಿನ ಸೈಜು ಹಿಮಪಾತ ಕಾರು ನಜ್ಜು ಗುಜ್ಜು’’ ಎಂದು ಬರೆದುಕೊಂಡಿದ್ದಾರೆ. (Archive)

Fact Check

ಈ ಸುದ್ದಿಯ ಸತ್ಯಾಸತ್ಯತೆಯನ್ನು ಸೌತ್ ಚೆಕ್ ಪರಿಶೋದಿಸಿದಾಗ ಇದು ಸಂಪೂರ್ಣ ಸುಳ್ಳು ಎಂಬುದು ತಿಳಿದುಬಂದಿದೆ. ವೈರಲ್ ಆಗುತ್ತಿರುವ ವೀಡಿಯೊ ಕೃತಕ ಬುದ್ದಿಮತ್ತೆಯಿಂದ ರಚಿಸಿದ್ದಾಗಿದೆ.

ವೈರಲ್ ಹೇಳಿಕೆಯನ್ನು ಪರಿಶೀಲಿಸಲು, ನಾವು ಮೊದಲು ಕೀವರ್ಡ್‌ಗಳನ್ನು ಬಳಸಿಕೊಂಡು ಗೂಗಲ್​ನಲ್ಲಿ ಹುಡುಕಿದೆವು, ಆದರೆ, ಇದಕ್ಕೆ ಸಂಬಂಧಿಸಿದ ಯಾವುದೇ ಸುದ್ದಿ ವರದಿಗಳು ಕಂಡುಬಂದಿಲ್ಲ. ನಂತರ ನಾವು ಗೂಗಲ್ ಲೆನ್ಸ್ ಬಳಸಿ ಫೋಟೋವನ್ನು ಹುಡುಕಿದೆವು, ಆದರೆ ವೈರಲ್ ಹೇಳಿಕೆಗೆ ಸಂಬಂಧಿಸಿದ ಯಾವುದೇ ಮಾಧ್ಯಮ ವರದಿಗಳು ಕಂಡುಬಂದಿಲ್ಲ. ಇದು ಫೋಟೋವನ್ನು AI ಸಹಾಯದಿಂದ ರಚಿಸಲಾಗಿದೆ ಎಂದು ನಮಗೆ ಅನುಮಾನ ಮೂಡಿಸಿತು.

ಅಲ್ಲದೆ ಫೋಟೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ನಾವು ಹಲವಾರು ವ್ಯತ್ಯಾಸಗಳನ್ನು ಗಮನಿಸಿದ್ದೇವೆ. ಉದಾಹರಣೆಗೆ, ವೈರಲ್‌ ವೀಡಿಯೊದ ಹಲವು ಫ್ರೇಮ್‌ಗಳಲ್ಲಿ ಜರ್ಕ್‌ ಮೋಷನ್‌ ಆಗುವುದು ಕಾಣಬಹುದು. ಅಷ್ಟೊಂದು ಅಪಾಯಕಾರಿಯನ್ನು ಹಿಮಪಾತ ಆಗುತ್ತಿದ್ದರೂ ವಾಹನವನ್ನು ಚಲಾಯಿಸಿಕೊಂಡು ವೀಡಿಯೊ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ ವೀಡಿಯೊವನ್ನು ಮೇಲ್ನೋಟಕ್ಕೆ ಗಮನಿಸಿದಾಗ ಇದರಲ್ಲಿ ಯಾವುದೇ ನೈಜ್ಯತೆಯ ಅಂಶವಿಲ್ಲ ಎನ್ನುವುದು ಕಂಡುಬರುತ್ತದೆ.

ಚಿತ್ರದ ದೃಢೀಕರಣವನ್ನು ಪರಿಶೀಲಿಸಲು, ನಾವು ಅದನ್ನು ವಿಶ್ವಾಸಾರ್ಹ AI ಚಿತ್ರ ಪತ್ತೆ ಸಾಧನಗಳಲ್ಲಿ ಪರೀಕ್ಷಿಸಿದ್ದೇವೆ. Hive Moderation ನಲ್ಲಿ ಪರೀಕ್ಷಿಸಿದಾಗ ಇದನ್ನು ಶೇ. 99.9 ರಷ್ಟು ಎಐಯಿಂದ ಸೃಷ್ಟಿಸಲಾಗಿದೆ ಎಂದು ಹೇಳಿದೆ. Sightengine ​ನಲ್ಲಿ ಪರೀಕ್ಷಿಸಿದಾಗ ಇದು ಶೇ. 92 ರಷ್ಟು ಎಐಯಿಂದ ರಚಿತವಾಗಿದೆ ಎಂದು ಹೇಳಿದೆ. ವಾಸ್‌ ಇಟ್‌ ಎಐ ಟೂಲ್‌ ಕೂಡ ಈ ವೀಡಿಯೊ ಎಐ ಮೂಲಕ ರಚಿಸಲಾಗಿದೆ ಎಂದು ಹೇಳಿದೆ.

ಹೀಗಾಗಿ ಈ ಎಲ್ಲ ಮಾಹಿತಿಯ ಆಧಾರದ ಮೇಲೆ, ಕಾಶ್ಮೀರದಲ್ಲಿ ಕಲ್ಲಿನ ಸೈಜಿನ ಹಿಮಪಾತ ಎಂದು ವೈರಲ್ ಆಗುತ್ತಿರುವ ವೀಡಿಯೊ ನಿಜವಲ್ಲ ಇದನ್ನು ಎಐಯಿಂದ ರಚಿಸಲಾಗಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.

Fact Check: Video shows Ukraine’s recent strike on Russia’s Kuibyshev oil refinery? No, here are the facts

Fact Check: പ്രധാനമന്ത്രി നരേന്ദ്രമോദിയുടെ 76-ാം ജന്മദിനത്തില്‍ ബുര്‍ജ് ഖലീഫയില്‍ ആശംസ? വീഡിയോയുടെ സത്യമറിയാം

Fact Check: இரு கைகளும் இல்லாத பெண் ஜிம்னாஸ்டிக்ஸ் செய்யும் வைரல் காணொலி உண்மையா?

Fact Check: ದೆಹಲಿಯಲ್ಲಿ ಮಳೆಯ ನಡುವೆಯೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಭಟನೆ? ಇಲ್ಲ, ಇದು ಹಳೆಯ ವಿಡಿಯೊ

Fact Check: ఢిల్లీలో సీఈసీ జ్ఞానేశ్ కుమార్‌కు వ్యతిరేకంగా నిరసనా? కాదు, పాత వీడియో వైరల్