Kannada

Fact Check: ಉ. ಪ್ರದೇಶದಲ್ಲಿ ರೌಡಿಗಳಿಗೆ ಯೋಗಿ ಆದಿತ್ಯನಾಥ್ ಕೊಡುತ್ತಿರುವ ಶಿಕ್ಷೆ ಎಂದು ಗುಜರಾತ್​ನ ವೀಡಿಯೊ ವೈರಲ್

ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರೌಡಿಗಳಿಗೆ ಶಿಕ್ಷೆ ಕೊಡುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಹಗ್ಗಗಳಿಂದ ಕಟ್ಟಿಹಾಕಿದ ಜನರನ್ನು ಪೊಲೀಸರು ಥಳಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

vinay bhat

ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರೌಡಿಗಳಿಗೆ ಶಿಕ್ಷೆ ಕೊಡುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಹಗ್ಗಗಳಿಂದ ಕಟ್ಟಿಹಾಕಿದ ಜನರನ್ನು ಪೊಲೀಸರು ಥಳಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ಹಲವಾರು ಜನರನ್ನು ಹಗ್ಗಗಳಿಂದ ಕಟ್ಟಿಹಾಕಿರುವುದು ಕಂಡುಬರುತ್ತದೆ. ಜೊತೆಗೆ ಪೊಲೀಸರು ಸಹ ಇದ್ದಾರೆ. ಇದಲ್ಲದೆ, ಪೊಲೀಸ್ ಅಧಿಕಾರಿಗಳು ಹಗ್ಗಗಳಿಂದ ಕಟ್ಟಿಹಾಕಿದವರನ್ನು ಹೊಡೆಯುವುದನ್ನು ಕಾಣಬಹುದು.

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ರೌಡಿಗಳಿಗೆ ಯೋಗೀಜಿ ಕೊಡುತ್ತಿರುವ ಶಿಕ್ಷೆ ನೋಡಿದರೆ ಅವರು ಒಂದು ತಿಂಗಳು ನಿದ್ದೆಯನ್ನು ಕೂಡ ಮಾಡುವುದಕ್ಕೆ ಹೆದರುತ್ತಾರೆ’’ ಎಂದು ಬರೆದುಕೊಂಡಿದ್ದಾರೆ. (Archive)

Fact Check

ಈ ಸುದ್ದಿಯ ಸತ್ಯಾಸತ್ಯತೆಯನ್ನು ಸೌತ್ ಚೆಕ್ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವೀಡಿಯೊ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಈ ವೀಡಿಯೊ ಗುಜರಾತ್‌ನ ಪಠಾಣ್‌ನಿಂದ ಬಂದಿದ್ದು, ಅಲ್ಲಿ ಪೊಲೀಸರು ತೋಟದ ಮನೆಯ ಮೇಲೆ ದಾಳಿ ಮಾಡಿದ ಆರೋಪಿಗಳನ್ನು ಸಾರ್ವಜನಿಕ ಮೆರವಣಿಗೆಯಲ್ಲಿ ಕರೆದೊಯ್ದರು.

ನಿಜಾಂಶವನ್ನು ತಿಳಿಯಲು ನಾವು ವೈರಲ್ ವೀಡಿಯೊದ ಪ್ರಮುಖ ಕೀ ಫ್ರೇಮ್‌ಗಳನ್ನು ಗೂಗಲ್ ಲೆನ್ಸ್ ಸಹಾಯದಿಂದ ಹುಡುಕಾಟ ನಡೆಸಿದಾಗ ಈ ವೀಡಿಯೊ ಮಾರ್ಚ್ 19 ರಂದು ಎಕ್ಸ್ ಬಳಕೆದಾರರೊಬ್ಬರು ಪೋಸ್ಟ್‌ ಮಾಡಿರುವುದು ಕಂಡುಬಂತು.

ವೀಡಿಯೊದ ಜೊತೆಗಿನ ಶೀರ್ಷಿಕೆಯಲ್ಲಿ ಅದು ಗುಜರಾತ್‌ನ ಪಠಾಣ್ ಜಿಲ್ಲೆಯ ಚನಸ್ಮಾ ತಾಲೂಕಿನಿಂದ ಬಂದಿದೆ ಎಂದು ಬರೆಯಲಾಗಿದೆ. ಮಾರ್ಚ್ 15 ರ ರಾತ್ರಿ, ಚನಸ್ಮಾ ತಾಲ್ಲೂಕಿನ ಜಿಲಿಯಾ ಗ್ರಾಮದಲ್ಲಿ, 15 ರಿಂದ 20 ದಾಳಿಕೋರರು ಆಯುಧಗಳು ಮತ್ತು ಕಲ್ಲುಗಳಿಂದ ತೋಟದ ಮನೆಯ ಮೇಲೆ ದಾಳಿ ಮಾಡಿ, ಹಲವಾರು ಜನರನ್ನು ಥಳಿಸಿದ್ದಾರೆ. ದೇವಾಲಯದ ದೇಣಿಗೆಗೆ ಸಂಬಂಧಿಸಿದ ಹಳೆಯ ದ್ವೇಷದಿಂದಾಗಿ ಈ ದಾಳಿ ನಡೆದಿದೆ. ಇದರ ನಂತರ, ಪೊಲೀಸರು ಕ್ರಮ ಕೈಗೊಂಡು, 18 ಆರೋಪಿಗಳನ್ನು ಬಂಧಿಸಿದರು ಮತ್ತು ಮಾರ್ಚ್ 18 ರಂದು ಅವರಿಂದ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಸಾರ್ವಜನಿಕ ಮೆರವಣಿಗೆ ನಡೆಸಿದರು ಎಂಬ ಮಾಹಿತಿ ಇದರಲ್ಲಿದೆ.

ಈ ಘಟನೆಗೆ ಸಂಬಂಧಿಸಿದ ಮತ್ತೊಂದು ವೀಡಿಯೊ ಮಾರ್ಚ್ 19 ರಂದು ನ್ಯೂಸ್ 18 ಗುಜರಾತಿಯ ಎಕ್ಸ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ, ವೈರಲ್ ವೀಡಿಯೊದಲ್ಲಿರುವಂತೆಯೇ ಹಗ್ಗಗಳಿಂದ ಕಟ್ಟಲ್ಪಟ್ಟ ಜನರನ್ನು ಇದು ತೋರಿಸುತ್ತದೆ. ಈ ವೀಡಿಯೊದೊಂದಿಗಿನ ಶೀರ್ಷಿಕೆಯು ಇದು ಗುಜರಾತ್‌ನ ಪಠಾಣ್‌ನಿಂದ ಬಂದಿದೆ ಎಂದು ಹೇಳಿದೆ.

ಮಾರ್ಚ್ 18 ರಂದು ಆಜ್ ತಕ್ ವೆಬ್‌ಸೈಟ್‌ನಲ್ಲಿ ವೈರಲ್ ವೀಡಿಯೊದ ಸ್ಕ್ರೀನ್ ಶಾಟ್ ಜೊತೆಗೆ ಪ್ರಕಟವಾದ ವರದಿಯನ್ನು ನಾವು ಕಂಡುಕೊಂಡಿದ್ದೇವೆ. ಕೆಲವು ದಿನಗಳ ಹಿಂದೆ, ಶಸ್ತ್ರಾಸ್ತ್ರಗಳೊಂದಿಗೆ ಶಸ್ತ್ರಸಜ್ಜಿತರಾದ 15 ರಿಂದ 20 ಜನರು ಜಿಲಿಯಾ ಗ್ರಾಮದ ತೋಟದ ಮನೆಯ ಮೇಲೆ ದಾಳಿ ಮಾಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ದಾಳಿಕೋರರು ತೋಟದ ಮನೆಯ ಗೇಟ್ ಮತ್ತು ಗೋಡೆಗಳಿಗೆ ವ್ಯಾಪಕ ಹಾನಿಯನ್ನುಂಟುಮಾಡಿದರು ಮತ್ತು ಅಲ್ಲಿದ್ದವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ದೇವಾಲಯದ ದೇಣಿಗೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದವೇ ಈ ದಾಳಿಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ವಿಷಯದಲ್ಲಿ ಚನಸ್ಮಾ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿವೆ.

ಈ ಪ್ರಕರಣದಲ್ಲಿ ಕ್ರಮ ಕೈಗೊಂಡಿರುವ ಪೊಲೀಸರು 18 ಮಂದಿಯನ್ನು ಬಂಧಿಸಿದ್ದಾರೆ. ಬಂಧನದ ನಂತರ, ಆರೋಪಿಗಳನ್ನು ಪೊಲೀಸ್ ಠಾಣೆಯಿಂದ ಬಸ್ ನಿಲ್ದಾಣದವರೆಗೆ ಸಾರ್ವಜನಿಕವಾಗಿ ಮೆರವಣಿಗೆ ಮಾಡಲಾಯಿತು, ಅಲ್ಲಿ ಅವರನ್ನು ಧರಣಿ ನಡೆಸಿ ಕ್ಷಮೆಯಾಚಿಸುವಂತೆ ಮಾಡಲಾಯಿತು. ನಂತರ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು ಎಂಬ ಮಾಹಿತಿ ಇದರಲ್ಲಿದೆ.

ಧಿವ್ಯಾ ಭಾಸ್ಕರ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯನ್ನು ಸಹ ನಾವು ಕಂಡುಕೊಂಡಿದ್ದೇವೆ. ಈ ವರದಿಯು ಮೇಲಿನಂತೆಯೇ ಮಾಹಿತಿಯನ್ನು ಒಳಗೊಂಡಿದೆ.

ಹೀಗಾಗಿ ಈ ಎಲ್ಲ ಮಾಹಿತಿಯ ಆಧಾರದ ಮೇಲೆ, ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರೌಡಿಗಳಿಗೆ ಶಿಕ್ಷೆ ಕೊಡುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ವೈರಲ್ ಆಗಿರುವ ವೀಡಿಯೊ ಗುಜರಾತ್‌ನ ಪಠಾಣ್‌ನದ್ದು ಎಂದು ನಾವು ಖಚಿತವಾಗಿ ಹೇಳುತ್ತೇವೆ.

Fact Check: Video shows Ukraine’s recent strike on Russia’s Kuibyshev oil refinery? No, here are the facts

Fact Check: പ്രധാനമന്ത്രി നരേന്ദ്രമോദിയുടെ 76-ാം ജന്മദിനത്തില്‍ ബുര്‍ജ് ഖലീഫയില്‍ ആശംസ? വീഡിയോയുടെ സത്യമറിയാം

Fact Check: இரு கைகளும் இல்லாத பெண் ஜிம்னாஸ்டிக்ஸ் செய்யும் வைரல் காணொலி உண்மையா?

Fact Check: ದೆಹಲಿಯಲ್ಲಿ ಮಳೆಯ ನಡುವೆಯೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಭಟನೆ? ಇಲ್ಲ, ಇದು ಹಳೆಯ ವಿಡಿಯೊ

Fact Check: ఢిల్లీలో సీఈసీ జ్ఞానేశ్ కుమార్‌కు వ్యతిరేకంగా నిరసనా? కాదు, పాత వీడియో వైరల్