Top Stories

Fact Check: ಗೋರಖ್‌ಪುರದ ಸಿಎಎ ವಿರೋಧಿ ಪ್ರತಿಭಟನೆಯ ಹಳೆಯ ವೀಡಿಯೊ ಸಂಭಾಲ್ ಪ್ರತಿಭಟನೆ ಎಂದು ವೈರಲ್

ವೈರಲ್ ಕ್ಲಿಪ್ ಸಂಭಾಲ್ ಪ್ರತಿಭಟನೆ ಅಥವಾ ಇತ್ತೀಚಿನದ್ದಲ್ಲ. ಇದು ಡಿಸೆಂಬರ್ 2019 ರಲ್ಲಿ ಗೋರಖ್‌ಪುರದಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡುವ ವೀಡಿಯೊ ಆಗಿದೆ.

vinay bhat

ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಒಂದು ವೈರಲ್ ಆಗುತ್ತಿದ್ದು, ಪ್ರತಿಭಟನಾಕಾರರ ಗುಂಪಿನ ಮೇಲೆ ಸಮವಸ್ತ್ರದಲ್ಲಿರುವ ಪೊಲೀಸರು ಲಾಠಿ ಚಾರ್ಜ್ ನಡೆಸುತ್ತಿರುವುದನ್ನು ಕಾಣಬಹುದು. ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸರ್ವೇಗಾಗಿ ನ್ಯಾಯಾಲಯ ಹೊರಡಿಸಿದ ಆದೇಶದ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ಪೋಸ್ಟ್ ಹೇಳುತ್ತದೆ.

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ಉತ್ತರ ಪ್ರದೇಶ ಪೋಲೀಸರು ಇಂದು ತುಂಬಾ ಭಯಾನಕವಾಗಿ ಬ್ಯಾಟಿಂಗ್ ಮಾಡಿದ್ದಾರೆ ಮತ್ತು ಮೂವರನ್ನು ಶಾಂತಿದೂತ ಮುಸ್ಲಿಂಗಳನ್ನು ಸ್ವರ್ಗಕ್ಕೆ ಕಳುಹಿಸಿ ಕೊಟ್ಟಿದ್ದಾರೆ..!!’’ ಎಂದು ಬರೆದುಕೊಂಡಿದ್ದಾರೆ.

ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಮೊಘಲ್ ಕಾಲದ ಜಾಮಾ ಮಸೀದಿಯಲ್ಲಿ ನ್ಯಾಯಾಲಯದ ಆದೇಶದ ಸಮೀಕ್ಷೆಯ ವಿರುದ್ಧ ಇತ್ತೀಚೆಗೆ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಲಾಠಿ ಪ್ರಹಾರವನ್ನು ತುಣುಕು ತೋರಿಸುತ್ತದೆ ಎಂದು ಹೇಳಲಾಗುವ ಪೋಸ್ಟ್ ಅನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಸೌತ್ ಚೆಕ್ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವೀಡಿಯೊ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ವೈರಲ್ ಕ್ಲಿಪ್ ಸಂಭಾಲ್ ಪ್ರತಿಭಟನೆ ಅಥವಾ ಇತ್ತೀಚಿನದ್ದಲ್ಲ. ಇದು ಡಿಸೆಂಬರ್ 2019 ರಲ್ಲಿ ಗೋರಖ್‌ಪುರದಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡುವ ವೀಡಿಯೊ ಆಗಿದೆ.

ವೈರಲ್ ವೀಡಿಯೊದ ಕೀಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಜನವರಿ 2020 ರಂದು ಫೇಸ್‌ಬುಕ್​ನಲ್ಲಿ ಉತ್ತಮ ರೆಸಲ್ಯೂಶನ್‌ನಲ್ಲಿರುವ ಇದೇ ವೀಡಿಯೊ ನಮಗೆ ಸಿಕ್ಕಿತು. ಈ 2020 ರ ಪೋಸ್ಟ್ ಉತ್ತರ ಪ್ರದೇಶದಲ್ಲಿ CAA (ಪೌರತ್ವ ತಿದ್ದುಪಡಿ ಕಾಯ್ದೆ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಪೊಲೀಸ್ ಲಾಠಿ ಚಾರ್ಜ್ ಅನ್ನು ತೋರಿಸುತ್ತದೆ ಎಂದು ಹೇಳುತ್ತದೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿನ ವಿವರಣೆಯಿಂದ ಸುಳಿವುಗಳನ್ನು ತೆಗೆದುಕೊಂಡು ನಾವು ಗೂಗಲ್ ಕೀವರ್ಡ್ ಹುಡುಕಾಟವನ್ನು ನಡೆಸಿದ್ದೇವೆ. ಆಗ 20 ಡಿಸೆಂಬರ್ 2019 ರಂದು ಲೈವ್ ಹಿಂದೂಸ್ತಾನ್ ಯೂಟ್ಯೂಬ್ ಚಾನೆಲ್ ಪ್ರಕಟಿಸಿದ ಸುದ್ದಿ ವರದಿ ನಮಗೆ ಕಂಡಿದೆ. ಇದಕ್ಕೆ ‘‘ಗೋರಖ್‌ಪುರ: ಸಿಎಎ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಕಲ್ಲು ತೂರಾಟ, ಲಾಠಿ ಚಾರ್ಜ್‌ನಲ್ಲಿ ಇಬ್ಬರು ಗಾಯಗೊಂಡರು.’’ ಎಂಬ ಶೀರ್ಷಿಕೆ ನೀಡಲಾಗಿದೆ. ವರದಿಯ ಪ್ರಕಾರ, 2019 ರ ಡಿಸೆಂಬರ್ 20 ರಂದು ಗೋರಖ್‌ಪುರದ ನಖಾಸ್ ಚೌಕ್‌ನಲ್ಲಿ ಸಿಎಎ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಕಲ್ಲುಗಳನ್ನು ಎಸೆದ ಪ್ರತಿಭಟನಾಕಾರರನ್ನು ಪೊಲೀಸರು ತಡೆದು ಲಾಠಿ ಚಾರ್ಜ್ ನಡೆಸಿದರು. ಈ ಸಂದರ್ಭ ನಡೆದ ಪೊಲೀಸ್ ಲಾಠಿ ಚಾರ್ಜ್​ನ ವೀಡಿಯೊವನ್ನು ವಿಭಿನ್ನ ಕೋನದಿಂದ ಇಲ್ಲಿ ತೋರಿಸಲಾಗಿದೆ.

ಎರಡು ವೀಡಿಯೊಗಳನ್ನು ಹೋಲಿಸಿದಾಗ, ವೈರಲ್ ವೀಡಿಯೊ ಮತ್ತು ಸುದ್ದಿ ವರದಿ ಎರಡರಲ್ಲೂ ಕಾಣಿಸಿಕೊಂಡಿರುವ ಸ್ಥಳದಲ್ಲಿ ನಾವು ಹೋಲಿಕೆಗಳನ್ನು ಗಮನಿಸಿದ್ದೇವೆ, ಅದನ್ನು ಕೆಳಗೆ ನೋಡಬಹುದು.

ವೀಡಿಯೊದಲ್ಲಿ, ನಾವು ಹಲವಾರು ಅಂಗಡಿಗಳನ್ನು ಮತ್ತು ಅವುಗಳ ಹೆಸರನ್ನು ಬೋರ್ಡ್‌ಗಳಲ್ಲಿ ಕಾಣಬಹುದು. ನಾವು ಗೂಗಲ್ ಮ್ಯಾಪ್ಸ್​ನಲ್ಲಿ ಈ ಹೆಸರುಗಳನ್ನು ಹುಡುಕಿದೆವು ಮತ್ತು ವೀಡಿಯೊ ಉತ್ತರ ಪ್ರದೇಶದ ಗೋರಖ್‌ಪುರ ಜಿಲ್ಲೆಯದ್ದು, ಇದು ಸಂಭಾಲ್‌ನಿಂದ 650 ಕಿಲೋಮೀಟರ್‌ಗಿಂತಲೂ ಹೆಚ್ಚು ದೂರದಲ್ಲಿದೆ ಎಂಬುದು ಖಚಿತವಾಯಿತು. ಗೂಗಲ್ ನಕ್ಷೆಗಳಲ್ಲಿ ತೋರಿಸಿರುವ ಪ್ರಕಾರ ಈ ಪ್ರದೇಶವು ಗೋರಖ್‌ಪುರದ ನಖಾಸ್ ಚೌಕ್ ಆಗಿದೆ. ವೈರಲ್ ಕ್ಲಿಪ್ ಮತ್ತು ಗೂಗಲ್ ಮ್ಯಾಪ್ಸ್ ಸ್ಟ್ರೀಟ್ ವ್ಯೂನಲ್ಲಿ ಕಂಡುಬರುವ ಅಂಗಡಿಯ ಹೋಲಿಕೆಯನ್ನು ಕೆಳಗೆ ನೋಡಬಹುದು.

ಸಿಎಎ ವಿರೋಧಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ನಂತರ ಗೋರಖ್‌ಪುರದಲ್ಲಿ ಪೊಲೀಸರ ಕ್ರಮದ ಕುರಿತು ಹಲವಾರು ಮಾಧ್ಯಮಗಳು ವರದಿ ಮಾಡಿವೆ. ಅಂತಹ ವರದಿಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ಎಲ್ಲ ಮಾಹಿತಿಯ ಆಧಾರದ ಮೇಲೆ ಗೋರಖ್‌ಪುರದಲ್ಲಿ ಸಿಎಎ ವಿರೋಧಿ ಪ್ರತಿಭಟನೆಯ ಹಳೆಯ 2019 ರ ವೀಡಿಯೊವನ್ನು ಉತ್ತರ ಪ್ರದೇಶದ ಸಂಭಾಲ್‌ನಲ್ಲಿನ ಇತ್ತೀಚಿನ ಪ್ರತಿಭಟನೆಗಳಿಗೆ ತಪ್ಪಾಗಿ ಲಿಂಕ್ ಮಾಡಲಾಗಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.

Fact Check: Potholes on Kerala road caught on camera? No, viral image is old

Fact Check: ഇത് റഷ്യയിലുണ്ടായ സുനാമി ദൃശ്യങ്ങളോ? വീഡിയോയുടെ സത്യമറിയാം

Fact Check: ஏவுகணை ஏவக்கூடிய ட்ரோன் தயாரித்துள்ள இந்தியா? வைரல் காணொலியின் உண்மை பின்னணி

Fact Check: ರಷ್ಯಾದಲ್ಲಿ ಸುನಾಮಿ ಅಬ್ಬರಕ್ಕೆ ದಡಕ್ಕೆ ಬಂದು ಬಿದ್ದ ಬಿಳಿ ಡಾಲ್ಫಿನ್? ಇಲ್ಲ, ವಿಡಿಯೋ 2023 ರದ್ದು

Fact Check: హైదరాబాద్‌లో ఇంట్లోకి చొరబడి పూజారిపై దాడి? లేదు, నిజం ఇక్కడ తెలుసుకోండి