

ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಒಂದು ವೈರಲ್ ಆಗುತ್ತಿದ್ದು ನೂರಾರು ಸಾಧುಗಳು ಹಿಮದಿಂದ ಆವೃತವಾದ ಪರ್ವತದ ಮೇಲೆ ಎದೆಯ ಆಳದ ವರೆಗೆ ಹಿಮದಲ್ಲಿ ನಿಂತು 'ಓಂ ನಮಃ ಶಿವಾಯ' ಮಂತ್ರವನ್ನು ಜಪಿಸುತ್ತಿರುವುದನ್ನು ತೋರಿಸಲಾಗಿದೆ. ಅನೇಕ ಜನರು ಈ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. (Archive)
ಈ ಸುದ್ದಿಯ ಸತ್ಯಾಸತ್ಯತೆಯನ್ನು ಸೌತ್ ಚೆಕ್ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವೀಡಿಯೊ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಈ ವೀಡಿಯೊವನ್ನು AI ಅಥವಾ ಕೃತಕ ಬುದ್ಧಿಮತ್ತೆಯಿಂದ ರಚಿಸಲಾಗಿದೆ. ಇದು ನಿಜವಾದ ಘಟನೆಯಲ್ಲ.
ನಿಜಾಂಶವನ್ನು ತಿಳಿಯಲು ನಾವು ಮೊದಲಿಗೆ ಗೂಗಲ್ನಲ್ಲಿ ಕೀವರ್ಸ್ ಸಹಾಯದಿಂದ ಹುಡುಕಿದ್ದೇವೆ. ಇಂತಹ ಘಟನೆ ನಿಜವಾಗಿಯೂ ನಡೆದಿದ್ದರೆ, ಅದು ಮಾಧ್ಯಮಗಳಲ್ಲಿ ವರದಿಯಾಗುತ್ತಿತ್ತು. ಆದರೆ ಯಾವುದೇ ವಿಶ್ವಾಸಾರ್ಹ ಮಾಧ್ಯಮದಿಂದ ನಮಗೆ ಈ ಕುರಿತು ಸುದ್ದಿ ಕಂಡುಬಂದಿಲ್ಲ. ಪರಿಣಾಮವಾಗಿ, ವೀಡಿಯೊವನ್ನು AI ರಚಿಸಿರಬಹುದು ಎಂಬ ಅನುಮಾನ ಮೂಡಿತು.
ನಂತರ ನಾವು ಎಐ ಮತ್ತೆ ಸಾಧನ Sightengine ನಲ್ಲಿ ಪರೀಕ್ಷಿಸಿದಾಗ ಇದನ್ನು ಶೇ. 99 ರಷ್ಟು ಎಐಯಿಂದ ಸೃಷ್ಟಿಸಲಾಗಿದೆ ಎಂದು ಹೇಳಿದೆ. Hive Moderation ನಲ್ಲಿ ಪರೀಕ್ಷಿಸಿದಾಗ ಇದು ಶೇ. 99 ರಷ್ಟು ಎಐಯಿಂದ ರಚಿತವಾಗಿದೆ ಎಂದು ಹೇಳಿದೆ. WasitAI ಕೂಡ ಇದನ್ನು ಕೃತಕ ಬುದ್ದಿಮತ್ತೆಯಿಂದ ರಚಿಸಲಾಗಿದೆ ಎಂದು ಹೇಳಿದೆ.
ಇನ್ನು ವೈರಲ್ ಆಗಿರುವ ವೀಡಿಯೊದ ಪ್ರಮುಖ ಕೀಫ್ರೇಮ್ಗಳನ್ನು ಗೂಗಲ್ ಲೆನ್ಸ್ನಲ್ಲಿ ಹುಡುಕಿದಾಗ, ಮೂಲ ವೀಡಿಯೊ ಆಶಿಶ್ ಸಕ್ಸೇನಾ ಎಂಬ ವ್ಯಕ್ತಿಯ ಇನ್‌ಸ್ಟಾಗ್ರಾಮ್ ಪುಟದಲ್ಲಿರುವುದು ಸಿಕ್ಕಿತು. ಇದರ ಶೀರ್ಷಿಕೆಯಲ್ಲಿ #sora2 ಮತ್ತು #sora ಎಂಬ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿದ್ದಾರೆ. ಸೋರಾ ಓಪನ್ AI ಯ ವೀಡಿಯೊ ಜನರೇಷನ್ ಪ್ಲಾಟ್‌ಫಾರ್ಮ್ ಆಗಿದ್ದು, ಇದು AI- ರಚಿತ ವೀಡಿಯೊಗಳನ್ನು ರಚಿಸಲು ಅನುಮತಿಸುತ್ತದೆ.
ಇವರು ತಮ್ಮ ಪ್ರೊಫೈಲ್ ಬಯೋದಲ್ಲಿ ತನ್ನನ್ನು AI ಸೃಷ್ಟಿಕರ್ತ ಎಂದು ಉಲ್ಲೇಖಿಸಿದ್ದಾರೆ. ಇದರೊಂದಿಗೆ, AI ಯಿಂದ ರಚಿಸಿದ ಹಲವಾರು ಇದೇ ರೀತಿಯ ವೀಡಿಯೊಗಳನ್ನು ಅವರ ಪ್ರೊಫೈಲ್‌ನಲ್ಲಿ ಕಾಣಬಹುದು. ಅದನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು.
ಹೀಗಾಗಿ ಈ ಎಲ್ಲ ಮಾಹಿತಿಯ ಆಧಾರದ ಮೇಲೆ, ಅನೇಕ ಜನರು AI- ರಚಿತವಾದ ವೀಡಿಯೊವನ್ನು ನೈಜ ಘಟನೆ ಎಂದು ಭಾವಿಸಿ ಪೋಸ್ಟ್ ಮಾಡಿದ್ದಾರೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.